ಕೆಪಿಸಿಸಿ ಸಾರಥಿಯಾಗಿ ದಿನೇಶ್ ಗುಂಡೂರಾವ್​ ಪದಗ್ರಹಣ

ಬೆಂಗಳೂರು: ಕೆಪಿಸಿಸಿಯ ನೂತನ ಅಧ್ಯಕ್ಷರಾಗಿ ದಿನೇಶ್ ಗೂಂಡುರಾವ್ ಹಾಗೂ ಕಾರ್ಯಾಧ್ಯಕ್ಷರಾಗಿ ಈಶ್ವರ್ ಖಂಡ್ರೆ ಇಂದು ಅಧಿಕಾರ ಸ್ವೀಕಾರ ಮಾಡಿದರು. ದಿನೇಶ್ ಗುಂಡೂರಾವ್​ಗೆ ನಿರ್ಗಮಿತ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಬಾವುಟ ನೀಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು.

ಬಳಿಕ ಮಾತನಾಡಿದ ನೂತನ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗೂಂಡುರಾವ್, ನನಗೆ ಸಿಕ್ಕಿರುವುದು ಅಧಿಕಾರ ಅಲ್ಲ, ಜವಾಬ್ದಾರಿ. ಅಧ್ಯಕ್ಷ ಸ್ಥಾನ ನಿಭಾಯಿಸುವುದು ಅಷ್ಟು ಸುಲಭ ಅಲ್ಲ. ಅನೇಕ ದಿಗ್ಗಜ ನಾಯಕರು ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಅವರ ರೀತಿ ನಾನು ಕೆಲಸ ಮಾಡುತ್ತೇನಾ ಅನ್ನೊ ಭಯ ಇದೆ. ಆದರೆ ನಾಯಕರ ಬೆಂಬಲ ಹಾಗೂ ಕಾರ್ಯಕರ್ತರ ಆಶೀರ್ವಾದ ನನಗೆ ಇದೆ. ಉತ್ತಮವಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಅತೃಪ್ತ ಕಾಂಗ್ರೆಸ್ ಶಾಸಕ ಎಂ.ಬಿ.ಪಾಟೀಲ್ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv