ಕೆಪಿಸಿಸಿ ನೂತನ ಸಾರಥಿಯಾಗಿ ಇಂದು ದಿನೇಶ್​​ ಗುಂಡೂರಾವ್​ ಪದಗ್ರಹಣ

ಬೆಂಗಳೂರು: ಇಂದು ಕೆಪಿಸಿಸಿ ನೂತನ ಅಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷರ ಪದಗ್ರಹಣ ಸಮಾರಂಭ ನಡೆಯಲಿದೆ. ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷರಾಗಿ ಈಶ್ವರ್ ಖಂಡ್ರೆ ಅಧಿಕಾರ ಸ್ವೀಕರಿಸಲಿದ್ದಾರೆ.

ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಪದಗ್ರಹಣ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಸತತ ಎಂಟು ವರ್ಷಗಳಿಂದ ಅಧ್ಯಕ್ಷರಾಗಿದ್ದ ಪರಮೇಶ್ವರ್​​​ರಿಂದ ದಿನೇಶ್ ಗುಂಡೂರಾವ್ ಅಧಿಕಾರ ಸ್ವೀಕರಿಸಲಿದ್ದಾರೆ.

ಇನ್ನು ಕಾರ್ಯಕ್ರಮದಲ್ಲಿ ಎಐಸಿಸಿ ನಾಯಕರು ಹಾಗೂ ಹಲವು ರಾಜ್ಯ ನಾಯಕರು ಭಾಗಿಯಾಗಲಿದ್ದಾರೆ. ಹಾಗೇ ಸಾವಿರಾರು ಕಾರ್ಯಕರ್ತರನ್ನ ಸೇರಿಸುವ ಮೂಲಕ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್​ ಮುಂದಾಗಿದೆ.

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv