ಮಂಡ್ಯ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಭಿನ್ನಮತ!

ಮಂಡ್ಯ: ಮಂಡ್ಯ ಲೋಕಸಭಾ ಉಪ ಚುನಾವಣೆಯ ಜೆಡಿಎಸ್​​ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲ ಮುಂದುವರೆದಿದ್ರೆ, ಇನ್ನೊಂದೆಡೆ ಬಿಜೆಪಿ ಅಭ್ಯರ್ಥಿಯನ್ನಾಗಿ ಡಾ. ಸಿದ್ದರಾಮಯ್ಯ ಅವರನ್ನು ಘೋಷಿಸಿದ ಬೆನ್ನಲ್ಲೇ ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಕಾರ್ಯಕರ್ತರು ಪ್ರತಿ ಚುನಾವಣೆಯಲ್ಲೂ ಹೊಸ ಮುಖಗಳಿಗೆ ಮಣೆ ಹಾಕಲಾಗುತ್ತಿದೆ ಎಂದು ವರಿಷ್ಠರ ನಿರ್ಧಾರದ ವಿರುದ್ಧ ವ್ಯಾಟ್ಸ್​ ಆ್ಯಪ್​ ಅಭಿಯಾನ ಆರಂಭಿಸಿದ್ದಾರೆ.

ಎಲ್​​.ಆರ್ ಶಿವರಾಮೇಗೌಡ, ಮಧು ಮಾದೇಗೌಡ ಎಲ್ಲರೂ ಬಂದರು ಸ್ವಲ್ಪ ದಿನ ಇದ್ದು ಹೋದರು. ನಿಮಗೆ ನಿಷ್ಠಾವಂತ ಕಾರ್ಯಕರ್ತರು ಕಣ್ಣಿಗೆ ಕಾಣಿಸುತ್ತಿಲ್ಲವಾ? ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಾಗುವುದು ನಿಮಗೆ ಬೇಡವಾ? ಜಿಲ್ಲೆಯ ಸಮಸ್ಯೆಗಳ ಬಗೆಗೆ ಒಂದೇ ಒಂದು ಹೋರಾಟ ಮಾಡದ, ಕಾರ್ಯಕರ್ತರ ಜೊತೆ ಹೊಂದಾಣಿಕೆ ಇಲ್ಲದ ಜಿಲ್ಲಾಧ್ಯಕ್ಷ ನಾಗಣ್ಣಗೌಡರನ್ನು ಬದಲಾವಣೆ ಮಾಡಿ ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲ್ಲದೇ ಪ್ರತಿ ಚುನಾವಣೆಯಲ್ಲೂ ಜೆಡಿಎಸ್​ಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಹೊಂದಾಣಿಕೆ ರಾಜಕಾರಣ ಮಾಡಲಾಗುತ್ತಿದೆ. ಒಳ ಒಪ್ಪಂದದ ಅಂಗವಾಗಿಯೇ ಅಶ್ವಥ್ ನಾರಾಯಣ್​​​​ಗೆ ಟಿಕೆಟ್ ತಪ್ಪಿಸಿ ಸಿದ್ದರಾಮಯ್ಯಗೆ ಕೊಡಲಾಗಿದೆ ಎಂದು ಆರೋಪಿಸಿದ್ದಾರೆ. ಅಲ್ಲದೇ ಇದನ್ನು ವಿರೋಧಿಸಿ ನಗರ ಘಟಕದ ಅಧ್ಯಕ್ಷ ಅರವಿಂದ್ ಮತ್ತು ಪದಾಧಿಕಾರಿಗಳು ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv