ದಾವಣಗೆರೆಯಲ್ಲಿ ಸಚಿವ ಎಸ್.ಆರ್ ಶ್ರೀನಿವಾಸ್ ಧ್ವಜಾರೋಹಣ

ದಾವಣಗೆರೆ: ಇಂದು 70ನೇ ಗಣರಾಜ್ಯೋತ್ಸವ ಸಂಭ್ರಮ. ಈ ಹಿನ್ನೆಲೆ ದಾವಣಗೆರೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಆರ್ ಶ್ರೀನಿವಾಸ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಅವರು ತೆರೆದ ವಾಹನದಲ್ಲಿ ಕವಾಯತು ವೀಕ್ಷಣೆ ಮಾಡಿದರು. ನಂತರ ಶಾಲಾ ಮಕ್ಕಳಿಂದ ಗೌರವ ವಂದನೆ ಸ್ವೀಕರಿಸಿದರು. ಈ ವೇಳೆ ಸಂಸದ ಜಿಎಮ್ ಸಿದ್ದೇಶ್ವರ, ದಾವಣಗೆರೆ ಉತ್ತರ ಶಾಸಕ ಎಸ್.ಎ ರವೀಂದ್ರನಾಥ, ಪಾಲಿಕೆ ಮಹಾಪೌರ ಶೋಭಾ ಪಲ್ಲಾಗಟ್ಟೆ , ಜಿಲ್ಲಾ ವರಿಷ್ಠಾಧಿಕಾರಿ ಆರ್. ಚೇತನ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿ.ಪಂ ಸಿಇಓ ಅಶ್ವತಿ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv