‘ಅನ್ನಭಾಗ್ಯದ ಅಕ್ಕಿ ಪ್ರಮಾಣ ಕಡಿತ ಅನ್ಯಾಯ’

ತುಮಕೂರು: ಬಜೆಟ್​ನಲ್ಲಿ ರೈತರ ಸಾಲಮನ್ನಾ ಮಾಡಿದ್ದು ಸ್ವಾಗತಾರ್ಹ ಕ್ರಮ. ಆದರೆ, ಅನ್ನಭಾಗ್ಯದ ಅಕ್ಕಿ ಕಡಿತ ಮಾಡಿದ್ದು ಬಡವರಿಗೆ ತೊಂದರೆಯಾಗಲಿದ್ದು, ಈ ಕ್ರಮವನ್ನು ಪುನರ್​ಪರಿಶೀಲನೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಒತ್ತಾಯಿಸುತ್ತೇನೆ ಎಂದು ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ.
ನೋಣವಿನಕೆರೆ ಕಾಡುಸಿದ್ದೇಶ್ವರ ಮಠದಲ್ಲಿ ಈ ಕುರಿತಂತೆ ಪ್ರತಿಕ್ರಿಯಿಸಿರುವ ಅವರು, ರೈತರು ರಾಜ್ಯ ಸರ್ಕಾರದ ಮೇಲೆ ಭರವಸೆ ಇಟ್ಟಿದ್ದಾರೆ. ಭರವಸೆಯನ್ನು ಉಳಿಸಿಕೊಳ್ಳಲು ಪೆಟ್ರೋಲ್, ‌ಡೀಸೆಲ್‌, ವಿದ್ಯುತ್ ದರ‌ ಏರಿಕೆ ಅನಿವಾರ್ಯ ಎಂದು ರಾಜ್ಯ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.
ಕೇಂದ್ರ ಸರ್ಕಾರ ‌ಸರಿಯಾಗಿ ಅನುದಾನ ನೀಡದ ಹಿನ್ನೆಲೆಯಲ್ಲಿ ಬೆಲೆ ಏರಿಕೆ ಮಾಡಬೇಕಾಗಿದೆ. ರಾಜ್ಯದ ಸಂಪನ್ಮೂಲ ಕ್ರೋಡೀಕರಣ ಮಾಡೋದು ಮುಖ್ಯಮಂತ್ರಿ ಜವಾಬ್ದಾರಿಯಾಗಿದ್ದು, ಬೆಲೆ ಏರಿಕೆ ಮಾಡಿದ್ದಾರೆ. ಆದರೆ, ಅನ್ನಭಾಗ್ಯ ಅಕ್ಕಿ ಪ್ರಮಾಣ ಕಡಿತ ಮಾಡಿರೋದು ಜನರಿಗೆ ಮಾಡಿರೋ ಅನ್ಯಾಯ. ಅನ್ನಭಾಗ್ಯ ಅಕ್ಕಿ ಪ್ರಮಾಣ ಕಡಿತಕ್ಕೆ ಅನುಮೋದನೆ ಸಿಗುವ ಮೊದಲು ಮುಖ್ಯಮಂತ್ರಿಗಳು ಪುನರ್ ಪರಿಶೀಲನೆ ಮಾಡಬೇಕೆಂದು ಸಂಸದ ಡಿ.ಕೆ ಸುರೇಶ್ ಒತ್ತಾಯಿಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv