ತಾಯಿ-ಅಕ್ಕನ ಹತ್ಯೆ ಮಾಡಿ, ಆತ್ಮಹತ್ಯೆಗೆ ಯತ್ನಿಸಿದ್ದ ವೈದ್ಯ ಪಾರು

ಬೆಂಗಳೂರು: ತಾಯಿ ಹಾಗೂ ಅಕ್ಕನನ್ನು ಹತ್ಯೆ ಮಾಡಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ ವೈದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಾ.ಗೋವಿಂದ ಪ್ರಕಾಶ್ ಆತ್ಮಹತ್ಯೆಗೆ ಯತ್ನಿಸಿದ್ದವರು.

ಶನಿವಾರದಂದು ಆರೋಪಿ ಡಾ. ಗೋವಿಂದ ಪ್ರಕಾಶ್​ ತನ್ನ ತಾಯಿ ಹಾಗೂ ಅಕ್ಕನಿಗೆ ಇನ್ಸುಲಿನ್ ಇನ್ ಜೆಕ್ಷನ್ ನೀಡಿ ಹತ್ಯೆ ಮಾಡಿದ್ದ. ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ. ಈ ಸಂಬಂಧ ಆರ್.ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗೆ ಖಾಸಗಿ ಆಸ್ಪತ್ರೆಯಲ್ಲಿ, ಪೊಲೀಸ್ ಬಂದೂಬಸ್ತ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸದ್ಯ ಆರೋಪಿ ಪ್ರಾಣಾಪಾಯದಿಂದ ಪಾರಾಗಿದ್ದು, ಡಿಸ್​​ಚಾರ್ಜ್ ಬಳಿಕ ಪೊಲೀಸರು ವಶಕ್ಕೆ ಪಡೆಯಲಿದ್ದಾರೆ.