ಅನುಮಾನಾಸ್ಪದ ರೀತಿಯಲ್ಲಿ ಯುವಕ ಆತ್ಮಹತ್ಯೆ

ನೆಲಮಂಗಲ: 21 ವರ್ಷದ ಯುವಕನೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನೆಲಮಂಗಲದ ಬಳಿ ನಡೆದಿದೆ. ಬೆಂಗಳೂರಿನಲ್ಲಿ ಕ್ಯಾಬ್​​ ಚಾಲಕನಾಗಿದ್ದ ಅರುಣ್​ ಕುಮಾರ್​ ಎಂಬಾತ  ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರವಾದ ಕಾರಣವೇನೆಂದು ತಿಳಿದುಬಂದಿಲ್ಲ. ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *