ನಾಳೆಯಿಂದ ರಂಗಾಯಣದಲ್ಲಿ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ

ಮೈಸೂರು: ನಾಳೆಯಿಂದ ರಂಗಾಯಣದಲ್ಲಿ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ನಡೆಯಲಿದೆ.  ದೇಸಿ ಸಂಸ್ಕೃತಿ ಪ್ರತಿಬಿಂಬಿಸುವ ಬಹುರೂಪಿ ನಾಟಕೋತ್ಸವಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಉತ್ಸವದಲ್ಲಿ ಪುಸ್ತಕ, ಗ್ರಾಮೀಣ ತಿಂಡಿ, ತಿನಿಸುಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ. ಇದಕ್ಕಾಗಿ 80 ಮಳಿಗೆಗಳನ್ನ ನಿರ್ಮಾಣ ಮಾಡಲಾಗಿದೆ ಎಂದು ರಂಗಾಯಣದ ನಾಟಕ ಶಾಲೆಯ ನಿರ್ದೇಶಕಿ ಭಾಗೀರಥಿ ಬಾಯಿ ಕದಂ ಮಾಹಿತಿ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ. 12ರಿಂದ 18ರವರೆಗೆ ವಿವಿಧ ರಂಗಕರ್ಮಿಗಳು ತಮ್ಮ ನಾಟಕಗಳನ್ನ ಪ್ರದರ್ಶಿಸಲಿದ್ದು, ಸಿದ್ಧತೆ ಭರದಿಂದ ಸಾಗಿದೆ. ನಾಟಕೋತ್ಸವದಲ್ಲಿ ರಂಗಾಯಣ ಹಾಗೂ ಕಲಾಮಂದಿರದ ವೇದಿಕೆಯಲ್ಲಿ 9 ರಾಜ್ಯಗಳ ವಿವಿಧ ಭಾಷೆಯ ನಾಟಕಗಳು ಪ್ರದರ್ಶನವಾಗಲಿವೆ. ಜೊತೆಗೆ ಕುವೆಂಪುರವರ ಶ್ರೀರಾಮಾಯಣ ದರ್ಶನಂ ನಾಟಕ ಪ್ರದರ್ಶನ ಪ್ರಮುಖ ಆಕರ್ಷಣೆಯಾಗಲಿದೆ. ರಂಗಾಯಣದ ಆವರಣದಲ್ಲಿ ವಿಭಿನ್ನ ಕಲಾಕೃತಿಗಳು ಸಹ ಪ್ರಮುಖ ಆಕರ್ಷಣೆಯಾಗಲಿವೆ ಎಂದು ಅವರು ತಿಳಿಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv