ಸೇತುವೆಗೆ ಕಾರು ಡಿಕ್ಕಿ: ಚಾಲಕ ದುರ್ಮರಣ

ಕೊಪ್ಪಳ: ರಸ್ತೆ ಬದಿ ಸೇತುವೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಷ್ಟಗಿ ತಾಲೂಕಿನ ತಾವರಗೇರಾ ಸಮೀಪ ನಡೆದಿದೆ. ಕಾರವಾರ ಜಿಲ್ಲೆ ಹಳಿಯಾಳದ ಶಿವಲಿಂಗ(27) ಮೃತ ಚಾಲಕ. ದುರ್ಘಟನೆಯಲ್ಲಿ ಕಾರಿನಲ್ಲಿದ್ದ ಇತರರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಕುಷ್ಟಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ತಾವರಗೇರಾ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv