ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

ದಾವಣಗೆರೆ: ಹೊನ್ನಾಳಿ ತಾಲೂಕಿನ ಕತ್ತಿಗೆ ಗ್ರಾಮದ ಬಳಿ ಖಾಸಗಿ ಬಸ್​​ ತಗ್ಗು ಪ್ರದೇಶಕ್ಕೆ ನುಗ್ಗಿ, ಚಾಲಕನ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿದೆ.
ಶಿಕಾರಿಪುರದಿಂದ ಹೊನ್ನಾಳಿಗೆ ಬರುತ್ತಿದ್ದ ಖಾಸಗಿ ಬಸ್, ಎದುರಿಗೆ ಬಂದ ಲಾರಿಗೆ ದಾರಿ ಬಿಡಲು ಹೋಗಿ ಅವಘಡ ನಡೆದಿದೆ. ಕ್ಷಣಾರ್ಧದಲ್ಲಿ ಚಾಲಕ ಚಲಿಸುತ್ತಿದ್ದ ಬಸ್​ನ್ನು ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿ ಈ ಅಪಘಾತ ತಪ್ಪಿಸಿದ್ದಾರೆ. ಬಸ್​​ನಲ್ಲಿ ಒಟ್ಟು 39 ಜನ ಪ್ರಯಾಣಿಕರಿದ್ದರು. ಪ್ರಯಾಣಿಕರೆಲ್ಲ ಸುರಕ್ಷಿತವಾಗಿದ್ದಾರೆ. ನ್ಯಾಮತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv