ದಾವಣಗೆರೆಗೆ ಬರ ಅಧ್ಯಯನ ತಂಡ ಭೇಟಿ

ದಾವಣಗೆರೆ : ರಾಜ್ಯ ಬರ ಅಧ್ಯಯನ ತಂಡ ಇಂದು ದಾವಣಗೆರೆಗೆ ಭೇಟಿ ನೀಡಿತು. ಕೃಷಿ ಸಚಿವ ಶಿವಶಂಕರ್ ರೆಡ್ಡಿ ನೇತೃತ್ವದ ರಾಜ್ಯ ಬರ ಅಧ್ಯಯನ ತಂಡ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಹಾಗೂ ನಿರ್ವಹಣೆ ಕುರಿತು ಅಧ್ಯಯನ ನಡೆಸಿತು. ಕಹುಣಸೇಕೆಟ್ಟೆ ಗ್ರಾಮಕ್ಕೆ ಭೇಟಿ ನೀಡಿ, ಕುಡಿಯುವ ನೀರು ಪೂರೈಕೆ ಕುರಿತು ಪರಿಶೀಲನೆ ನಡೆಸಿದ್ರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸು(ವಾಸು), ಕಾರ್ಮಿಕ ಸಚಿವ ವೆಂಕಟರಮಣ, ಕೃಷಿ ಸಚಿವ ಶಿವಶಂಕರರೆಡ್ಡಿ ಹಾಗೂ ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಕೃಷಿ ಸಚಿವ ಶಿವಶಂಕರರೆಡ್ಡಿ, ಆಯಾ ಪ್ರದೇಶಗಳ ವಸ್ತುಸ್ಥಿತಿ, ಅಧಿಕಾರಿಗಳು ಏನೆನು ಕ್ರಮ ಕೈಗೊಂಡಿದ್ದಾರೆ ಎಂಬ ಬಗ್ಗೆ ಅಧ್ಯಯನಕ್ಕಾಗಿ ಪ್ರವಾಸ ಕೈಗೊಂಡಿದ್ದೇವೆ. ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚನೆ ಮೆರೆಗೆ ಜಿಲ್ಲೆಯ ಪರಿಸ್ಥಿತಿ ತಿಳಿಯಲು ಪ್ರವಾಸ ಕೈಗೊಂಡಿದ್ದೇವೆ ಎಂದರು. ಈ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಹಳ ಇದೆ. ಕೆಲವು ಗ್ರಾಮಗಳಲ್ಲಿ ಬೋರ್ ವೆಲ್ ಹಾಕಿದ್ರೂ ನೀರು ಸಿಗ್ತಿಲ್ಲ. ಟ್ಯಾಂಕರ್ ಮುಖಾಂತರ ನೀರಿನ ವ್ಯವಸ್ಥೆ ಮಾಡಲಾಗಿದೆ. ಮುಂಗಾರು ಮತ್ತು ಹಿಂಗಾರು ಬೆಳೆ ನಷ್ಟವಾಗಿದೆ. ಜಿಲ್ಲೆಯಲ್ಲಿ ಸುಮಾರು ₹52 ಕೋಟಿ ಬೆಳೆ ನಷ್ಟವಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ. ಬೆಳೆ ನಷ್ಟ ಪರಿಹಾರಕ್ಕಾಗಿ ವರದಿ ಪಡೆದುಕೊಳ್ಳಲಾಗಿದೆ. ಸುಮಾರು ₹2,400 ಕೋಟಿ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕಿದೆ. ಬಿಡುಗಡೆ ಮಾಡ್ತಿವಿ ಅಂತ ಕೇಂದ್ರದವರು ಹೇಳ್ತಿದಾರೆ. ಅದಕ್ಕಾಗಿ ನಾವು ಪರಿಹಾರದ ನಿರೀಕ್ಷೆಯಲ್ಲಿದ್ದೇವೆ ಎಂದು ಹೇಳಿದ್ರು.

ಈ ಭಾಗದಲ್ಲಿ 800 ಅಡಿಗಳಷ್ಟು ಬೋರ್​​​ವೆಲ್ ಕೊರೆಯಲಾಗುತ್ತಿದೆ. 1000, 1200 ಅಡಿಗಳವರೆಗೂ ಬೋರ್​​ವೆಲ್ ಕೊರೆಯಲು ಸೂಚನೆ ನೀಡಲಾಗಿದೆ. ಕುಡಿಯುವ ನೀರಿನ ಪರಿಹಾರಕ್ಕಾಗಿ ಸರ್ಕಾರದ ಖಜಾನೆಯಲ್ಲಿ ಹಣ ಇದೆ. ಕುಡಿಯುವ ನೀರಿನ ವ್ಯವಸ್ಥೆ ಮಾಡುತ್ತೇವೆ. ನರೆಗಾ ಯೋಜನೆಯಡಿಯಲ್ಲಿ ಬಡವರಿಗೆ ಕೆಲಸ ಕೊಡುವ ಅನೇಕ ಕೆಲಸಗಳನ್ನು ಮಾಡಲಾಗುತ್ತಿದೆ. ಜನರಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಸಚಿವ ಶಿವಶಂಕರರೆಡ್ಡಿ ಹೇಳಿದರು.

ಬಳಿಕ ಜಗಳೂರು ತಾಲೂಕಿನ ಕಟ್ಟಿಗೆಹಳ್ಳಿ, ತೋರಣಗಟ್ಟ ಗ್ರಾಮಕ್ಕೂ ತೆರಳಿದ ಬರ ಅಧ್ಯಯನ ತಂಡ ಕುಡಿಯುವ ನೀರು ಪೂರೈಕೆ, ನರೇಗಾ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿತು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv