ಜಿಲ್ಲೆಗೆ ಎಸ್.ಕೆ ಕಾಂಬೋಜ್ ನೇತೃತ್ವದ ಬರ ಅಧ್ಯಯನ ತಂಡ ಭೇಟಿ

ಧಾರವಾಡ: ಜಿಲ್ಲೆಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಿದೆ. ಜಿಲ್ಲೆಯ ಹಿಂಗಾರು ಹಂಗಾಮಿನ ಬೆಳೆ ನಷ್ಟ ಮತ್ತು ಬರ ಪರಿಸ್ಥಿತಿ ಕುರಿತು ಅಧ್ಯಯನ ಹಿನ್ನೆಲೆಯಲ್ಲಿ ತಂಡ  ಭೇಟಿ ಕೊಟ್ಟಿದೆ. ಜಿಲ್ಲೆಯ ಮನಸೂರ, ಅಮ್ಮಿನಭಾವಿ ಮತ್ತು ಹಾರೋಬೆಳವಡಿ ಗ್ರಾಮದ ರೈತರ ಜಮೀನುಗಳಿಗೆ ಭೇಟಿ ನೀಡಲಿದ್ದಾರೆ. ಕೇಂದ್ರ ಜಲ ಸಂಪನ್ಮೂಲ ಇಲಾಖೆಯ ಹಿರಿಯ ಜಂಟಿ ನಿರ್ದೇಶಕ ಎಸ್.ಕೆ ಕಾಂಬೋಜ್ ನೇತೃತ್ವದ ತಂಡ ಭೇಟಿ ನೀಡಿದೆ. ಮೂರು ಜನ ಹಿರಿಯ ಅಧಿಕಾರಿಗಳ ತಂಡದಿಂದ ಜಿಲ್ಲೆಯ ಬರ ಅಧ್ಯಯನ ಮಾಡಲಾಗುತ್ತಿದೆ. ಬರ ಅಧ್ಯಯನ ತಂಡಕ್ಕೆ ಜಿಲ್ಲಾಧಿಕಾರಿ ದೀಪಾ ಚೋಳನ್, ಸಿಇಒ ಡಾ. ಬಿ.ಸಿ. ಸತೀಶ, ಅಪರ ಜಿಲ್ಲಾಧಿಕಾರಿ ಸುರೇಶ ಇಟ್ನಾಳ, ಉಪವಿಭಾಗಾಧಿಕಾರಿ ಮಹಮ್ಮದ ಜುಬೇರ, ತಹಸಿಲ್ದಾರ ಪ್ರಕಾಶ ಕುದರಿ, ಸೇರಿದಂತೆ ಹಲವು ಸಿಬ್ಬಂದಿ ಸಾಥ್ ನೀಡಿದ್ದಾರೆ.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv