ಹಾಸನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೊಟೆಸ್ಟ್

ಹಾಸನ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯಪಾಲ ವಜೂಭಾಯಿ ವಾಲ ಇಬ್ಬರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯ್ತು.

ಬಿ.ಎಸ್.ಯಡಿಯೂರಪ್ಪರನ್ನ ರಾಜ್ಯದಮುಖ್ಯಮಂತ್ರಿ ಸ್ಥಾನ ಅಲಂಕರಿಸಲು ರಾಜ್ಯಪಾಲ ವಜೂಭಾಯಿ ವಾಲ ಅವರು ಅನುವುಮಾಡಿಕೊಟ್ಟಿರುವುದು ಅತ್ಯಂತ ಖಂಡನೀಯ ಎಂದು ಡಿಎಸ್​ಎಸ್ ಕಾರ್ಯಕರ್ತರು ಕಿಡಿಕಾರಿದ್ರು. ರಾಜ್ಯಪಾಲರ ಹುದ್ದೆಯ ಘನತೆಯನ್ನ ಹಾಳು ಮಾಡಿದ್ದಾರೆ. ಸರ್ಕಾರ ರಚನೆಗೆ ಬೇಕಾದ ಅಗತ್ಯ ಸಂಖ್ಯಾಬಲ ಇಲ್ಲದಿದ್ದರೂ ವಾಮಮಾರ್ಗದಿಂದ ಅಧಿಕಾರದ ಗದ್ದುಗೆ ಹಿಡಿಯುವಲ್ಲಿ ಬಿಜೆಪಿ ಸಫಲವಾಗಿದೆ ಎಂದು ಅಸಮಾಧಾನ ಹೊರಹಾಕಿದರು. ಜೆಡಿಎಸ್ ಹಾಗೂ ಕಾಂಗ್ರೆಸ್‌ನ ಶಾಸಕರಿಗೆ ಆಸೆ, ಆಮಿಷಗಳನ್ನ ಒಡ್ಡುತ್ತಿದ್ದಾರೆಂದು ಆರೋಪಿಸಿದ್ರು. ಕೂಡಲೇ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ಸದನದಲ್ಲಿ ಬಹುಮತ ಸಾಬೀತು ಮಾಡಲು ಅವಕಾಶ ನೀಡಬೇಕೆಂದು ಆಗ್ರಹಿಸಿದ್ರು. ಇಲ್ಲವಾದ್ರೆ ಮುಂದೆ ಬಿಜೆಪಿ ವಿರುದ್ಧ ಉಗ್ರ ಹೋರಾಟ ಮಾಡೋದಾಗಿ ಎಚ್ಚರಿಕೆ ನೀಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstews.tv