ಹಾಸನ ಜಿಲ್ಲಾಧಿಕಾರಿಗೆ ಚುನಾವಣಾ ಆಯೋಗದಿಂದ ನೋಟಿಸ್​..!

ಹಾಸನ: ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅಫಿಡವಿಟ್​ ಅನ್ನ ಮರು ಪರಿಶೀಲನೆ ಮಾಡುವಂತೆ ಸೂಚಿಸಿ ಜಿಲ್ಲಾಧಿಕಾರಿಗೆ ಚುಣಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. ನಾಮಪತ್ರ ಸಲ್ಲಿಕೆ ವೇಳೆ ಪ್ರಜ್ವಲ್​ ರೇವಣ್ಣ ತಮ್ಮ ಆಸ್ತಿ ವಿಚಾರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಹಾಸನ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ಮಂಜು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರಿಗೆ ಮರು ಪರಿಶೀಲನೆ ಮಾಡಿ ವರದಿ ನೀಡುವಂತೆ ನೋಟಿಸ್​​ ಜಾರಿಮಾಡಿದೆ.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv