ಮೈಸೂರಿನಲ್ಲಿ ನಾಳೆ ದಕ್ಷಿಣ, ನೈರುತ್ಯ ಶಿಕ್ಷಕರ ಕ್ಷೇತ್ರ, ನೈರುತ್ಯ ಪದವೀಧರ ಕ್ಷೇತ್ರದ ಮತ ಏಣಿಕೆ

ಮೈಸೂರು: ನಾಳೆ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ, ನೈರುತ್ಯ ಪದವೀಧರ ಕ್ಷೇತ್ರದ ಮತ ಏಣಿಕೆ ನಗರದ ಮಹಾರಾಣಿ ನ್ಯೂ ಕಾಲೇಜಿನಲ್ಲಿ ನಡೆಯಲಿದ್ದು, ಮತ ಏಣಿಕ ಕೇಂದ್ರದ ಸುತ್ತಮುತ್ತ ಸೂಕ್ತ ಪೋಲಿಸ್ ವ್ಯವಸ್ಥೆ ಏರ್ಪಡಿಸಲಾಗಿದೆ ಅಂತ ಪ್ರಾದೇಶಿಕ ಆಯುಕ್ತೆ, ಚುನಾವಣಾಧಿಕಾರಿ ಹೇಮಲತಾ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಮತ ಎಣಿಕೆ ಪ್ರಕ್ರಿಯೆಗೆ ಸಕಲ ಸಿದ್ಧತೆ ಮಾಡಲಾಗಿದೆ. ಬೆಳಿಗ್ಗೆ 7:30ಕ್ಕೆ ಭದ್ರತಾ ಕೊಠಡಿ ತೆರೆಯಲಾಗುವುದು, 8 ಗಂಟೆಗೆ ಎಣಿಕೆ ಪ್ರಕ್ರಿಯೆ ಆರಂಭವಾಗುತ್ತದೆ. ಸಂಜೆ ವೇಳೆಗೆ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ ಅಂತ ತಿಳಿಸಿದ್ರು.

ಬ್ಯಾಲೆಟ್ ಪೇಪರ್​ನಲ್ಲಿ ಮತದಾನ ನಡೆದಿರುವ ಹಿನ್ನಲೆಯಲ್ಲಿ ಫಲಿತಾಂಶ ವಿಳಂಬವಾಗುವ ಸಾಧ್ಯತೆ ಇದೆ. ಮೊದಲ ಸುತ್ತಿನಲ್ಲಿ ಪ್ರಥಮ ಪ್ರಾಶಸ್ತ್ಯದ ಮತಗಳನ್ನು ಮಾತ್ರ ಎಣಿಕೆ ಮಾಡಲಾಗುವುದು. ಒಂದುವೇಳೆ ಕೋಟಾ ತಲುಪದೇ ಇದ್ದಲ್ಲಿ ಕಡಿಮೆ ಮತ ಪಡೆದ ಅಭ್ಯರ್ಥಿಯ ಮತಗಳನ್ನು ಹಂಚಲಾಗುವುದು ಎಂದು ವಿವರಿಸಿದ್ರು.
ಮತ ಎಣಿಕೆ ಕಾರ್ಯಕ್ಕಾಗಿ 435 ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ. ಯಾವುದೇ ಲೋಪದೋಷವಿಲ್ಲದಂತೆ ಎಣಿಕೆ ಪ್ರಕ್ರಿಯೆ ನಡೆಸಲಿದ್ದೇವೆ ಅಂತ ವಿಶ್ವಾಸ ವ್ಯಕ್ತಪಡಿಸಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv