ಚುನಾವಣೆಗೆ ಆಯೋಗ ಮತದಾರರ ಕರಡು ಪಟ್ಟಿ ಪರಿಷ್ಕರಣೆಗೆ ಅಧಿಸೂಚನೆ

ಬೆಂಗಳೂರು: ಒಂದು ಕಡೆ ರಾಜಕೀಯ ಪಕ್ಷಗಳು 2019ರ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿವೆ. ಮತ್ತೊಂದು ಕಡೆ ಚುನಾವಣೆಗೆ ಆಯೋಗವು ಕೊಡ ತನ್ನ ಸಿದ್ಧತೆಯಲ್ಲಿ ತೊಡಗಿಕೊಂಡಿದೆ. ಮತದಾರರ ಕರಡು ಪಟ್ಟಿ ಪರಿಷ್ಕರಣೆಗೆ ಚುನಾವಣೆಗೆ ಆಯೋಗವು ಅಧಿಸೂಚನೆ ಹೊರಡಿಸಿದೆ. ಮತದಾರರಿಗೆ ಆಕ್ಷೇಪಣೆ ಸಲ್ಲಿಸುವುದಕ್ಕೆ ನವೆಂಬರ್ 20 ಕೊನೆಯ ದಿನವಾಗಿದೆ. 2019 ರ ಜನವರಿ 4ರಂದು ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು. 2019ರ ಜನವರಿ 1ಕ್ಕೆ 18 ವರ್ಷ ಪೂರ್ಣಗೊಳ್ಳುವವರು ಮತದಾನದ ಹಕ್ಕು ಕೋರಿ ಅರ್ಜಿ ಸಲ್ಲಿಸಬಹುದು ಎಂದು ಚುನಾವಣೆಗೆ ಆಯೋಗ ತಿಳಿಸಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv