ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣಾ ಮತ ಎಣಿಕೆ ಕಾರ್ಯ ಆರಂಭ

ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣಾ ಮತ ಎಣಿಕೆ ಹಿನ್ನೆಲೆಯಲ್ಲಿ, ಮೈಸೂರಿನ ಪಡುವಾರಳ್ಳಿಯ ಮಹಾರಾಣಿ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಇಂದು ಬೆಳಿಗ್ಗೆ ಚುನಾವಣಾಧಿಕಾರಿಗಳು ಭದ್ರತಾ ಕೊಠಡಿಗಳನ್ನು ತೆರೆದಿದ್ದು ಮತ ಎಣಿಕೆ ಕಾರ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ.

ಬ್ಯಾಲೆಟ್ ಪೇಪರ್​ನಲ್ಲಿ ಮತದಾನ ನಡೆದಿರುವುದರಿಂದ ಫಲಿತಾಂಶ ವಿಳಂಬವಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಮೊದಲ ಸುತ್ತಲಿನಲ್ಲಿ ಪ್ರಥಮ ಪ್ರಾಶಸ್ತ್ಯ ಮತಗಳನ್ನು ಮಾತ್ರ ಎಣಿಕೆ ಮಾಡಲಾಗುವುದು. ಕೋಟಾ ತಲುಪದೇ ಇದ್ದಲ್ಲಿ ಕಡಿಮೆ ಮತ ಪಡೆದ ಅಭ್ಯರ್ಥಿಯ ಮತಗಳನ್ನು ಹಂಚಲಾಗುವುದು. ಮೂರು ಕ್ಷೇತ್ರಗಳ ಮತ ಎಣಿಕೆ ಕಾರ್ಯಕ್ಕಾಗಿ 435 ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ.  14 ಟೇಬಲ್​ಗಳಲ್ಲಿ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಪ್ರತಿ ಟೇಬಲ್​ಗೆ ಮೂವರು ಸಿಬ್ಬಂದಿ ನೇಮಿಸಲಾಗಿದೆ. ಎಣಿಕೆ ಕೇಂದ್ರದ ಸುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. 2೦೦ ಮೀಟರ್ ಸುತ್ತ ನಿಷೇಧಾಜ್ಣೆ ಜಾರಿ ಮಾಡಲಾಗಿದ್ದು, ಸಂಜೆ ವೇಳೆಗೆ ಫಲಿತಾಂಶ ಪ್ರಕಟವಾಗುವ ನಿರೀಕ್ಷೆಯಿದೆ. ಪ್ರಾದೇಶಿಕ ಆಯುಕ್ತೆ, ಚುನಾವಣಾಧಿಕಾರಿ ಹೇಮಲತಾ ನೇತೃತ್ವದಲ್ಲಿ ಮತಪತ್ರಗಳ ಜೋಡಣಾ ಕಾರ್ಯ ಆರಂಭವಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ:cantact@firstnews.tv