ಶಿವಮೊಗ್ಗದಲ್ಲಿ ಮಾಜಿ ಸಿಎಂಗಳ ಪುತ್ರರ ಸಮರ, ಕಲ್ಬುರ್ಗಿಯಲ್ಲಿ ಗೆಲ್ತಾರಾ ಸೋಲಿಲ್ಲದ ಸರದಾರ..?

ಬೆಂಗಳೂರು: ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ನಾಳೆ ನಡೆಯಲಿದೆ. ರಾಜ್ಯದಲ್ಲಿ ನಡೆಯಲಿರುವ ಎರಡನೇ ಮತ್ತು ಅಂತಿಮ ಹಂತದ ಚುನಾವಣೆಯಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಉತ್ತರ ಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರಗಳಲ್ಲಿ 237 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. 2.43 ಕೋಟಿ ಮತದಾರರು ವೋಟಿಂಗ್ ಮಾಡಲಿದ್ದಾರೆ. ಚುನಾವಣೆ ನಿರ್ವಹಣೆಗೆ 2.03 ಲಕ್ಷ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, 2,174 ಸೂಕ್ಷ್ಮ ವೀಕ್ಷಕರನ್ನು ನಿಯೋಜಿಸಲಾಗಿದೆ. 1,478 ಬೂತ್​ಗಳಲ್ಲಿ ವಿಡಿಯೋಗ್ರಾಫರ್​ಗಳನ್ನು ಹಾಗೂ 1,479 ಮತಗಟ್ಟೆಗಳಲ್ಲಿ ವೆಬ್ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಅಂತಾ ರಾಜ್ಯ ಚುನಾವಣಾ ಅಧಿಕಾರಿ ಸಂಜೀವ್ ಕುಮಾರ್ ಹೇಳಿದ್ದಾರೆ.

ಇನ್ನೂ 14 ಕ್ಷೇತ್ರಗಳ ಪೈಕಿ ಜೆಡಿಎಸ್ 3ರಲ್ಲಿ ಸ್ಪರ್ಧಿಸುತ್ತಿದ್ದು, 11 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಸ್ಪರ್ಧಿಸ್ತಿದೆ. ಎಲ್ಲಾ 14 ರಲ್ಲೂ ಬಿಜೆಪಿ ಅಭ್ಯರ್ಥಿಗಳನ್ನ ಕಣಕ್ಕಿಳಿಸಿದೆ. ಶಿವಮೊಗ್ಗ ಹಾಗೂ ಕಲಬುರ್ಗಿ ಮತಕ್ಷೇತ್ರಗಳನ್ನು ಹೈವೋಲ್ಟೇಜ್ ಕ್ಷೇತ್ರಗಳೆಂದು ಪರಿಗಣಿಸಲಾಗಿದೆ. ಶಿವಮೊಗ್ಗ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿಗಳ ಪುತ್ರರ ಮಧ್ಯೆ ಸ್ಪರ್ಧೆ ಏರ್ಪಟ್ಟಿದೆ. ಬಿಎಸ್ ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಹಾಗೂ ಎಸ್. ಬಂಗಾರಪ್ಪರ ಪುತ್ರ ಮಧು ಬಂಗಾರಪ್ಪರ ನಡುವೆ ನೇರ ಹಣಾಹಣಿ ಇದೆ. ಇನ್ನು ಕಲಬುರ್ಗಿ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ್​ ಖರ್ಗೆ ಹಾಗೂ ಕಾಂಗ್ರೆಸ್​ನಿಂದ ತೊರೆದು ಬಿಜೆಪಿಯಿಂದ ಕಣಕ್ಕಿಳಿದಿರುವ ಡಾ.ಉಮೇಶ್ ಜಾಧವ್ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಈ ಕ್ಷೇತ್ರವೂ ಹೈವೋಲ್ಟೇಜ್ ಕ್ಷೇತ್ರವಾಗಿ ಪರಿಗಣಿತವಾಗಿದೆ. ಇಬ್ಬರ ನಡುವೆ ನೇರ ಹಣಾಹಣಿ  ಏರ್ಪಟ್ಟಿದೆ.

Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv