ಮೋಟರ್​ ಹಾಕುವ ವೇಳೆ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು

ಚಿತ್ರದುರ್ಗ: ಮನೆಯಲ್ಲಿದ್ದ ನೀರಿನ ಮೋಟರ್​​ ಹಾಕುವ ವೇಳೆ ವಿದ್ಯುತ್ ಸ್ಪರ್ಶಿಸಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದಲ್ಲಿ ನಡೆದಿದೆ. ನಿಂಗಮ್ಮ ಪ್ರಸಾದ್​(48)ಮೃತ ಮಹಿಳೆ. ಮನೆಯಲ್ಲಿ ನೀರು ತುಂಬಿಸುವ ವೇಳೆ ನಿಂಗಮ್ಮ ವಿದ್ಯುತ್​ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಕುರಿತು ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv