ವಿದ್ಯುತ್​ ಸ್ಪರ್ಶ- ಇಬ್ಬರ ಸಾವು, ಓರ್ವನಿಗೆ ಗಂಭೀರ

ಚಿಕ್ಕೋಡಿ: ಗದ್ದೆಯಲ್ಲಿ ಕಳೆ ತೆಗೆಯುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ತಂದೆ-ಮಗ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕೋಡಿಯ ಅಲಖನೂರು ಗ್ರಾಮದ ಪಾವಿನ ತೋಟದಲ್ಲಿ ನಡೆದಿದೆ. ಹನುಮಂತ ಸವದತ್ತಿ (40), ಮಗ ಸಂತೋಷ ಸವದತ್ತಿ (16) ಮೃತ ದುರ್ದೈವಿಗಳು. ಇನ್ನೋರ್ವ ಪುತ್ರ ಮಲ್ಲಪ್ಪ ಸವದತ್ತಿ (12) ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಅಪ್ಪ ಮಕ್ಕಳು ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಕೊಳವೆ ಬಾವಿಗೆ ಹಾಕಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿದ ಕಾರಣ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಈ ಸಂಬಂಧ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv