ವಿದ್ಯುತ್ ಶಾರ್ಟ್ ಸರ್ಕ್ಯೂಟ್​: ಮನೆ ಭಸ್ಮ

ಕಾರವಾರ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ತಗುಲಿ ಮನೆಯೊಂದು ಸುಟ್ಟು ಕರಕಲಾದ ಘಟನೆ ಕುಮಟಾ ತಾಲೂಕಿನ ಹೆಗಡೆ ಗ್ರಾಮದಲ್ಲಿ‌ ನಡೆದಿದೆ.
ಮಹಾದೇವ ಗಾಂವ್ಕರ ಅಂಬಿಗ ಎಂಬುವರಿಗೆ ಸೇರಿದ ಮನೆ ಅದಾಗಿದ್ದು, ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.
ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ಉಪಕರಣಗಳು ಸುಟ್ಟು ಕರಕಲಾಗಿದೆ. ಅಲ್ಲದೆ ಮನೆಯ ಮೇಲ್ಛಾವಣಿ ಸುಟ್ಟು ಕುಸಿದಿದ್ದು ಮನೆ ಮಾಲೀಕರು ತಮ್ಮ ಸೂರು ಕಳೆದುಕೊಂಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದು ನಷ್ಟದ ಪಂಚನಾಮೆ ನಡೆಸಿದ್ದಾರೆ. ಈ ಸಂಬಂಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv