ಮೂರು ದಿನ.. ಮೂರು ಬಲಿ.. ಹಂತಕ ಯಾರು ಗೊತ್ತಾ.?

ಆನೇಕಲ್: ತಮಿಳುನಾಡು ಹಾಗೂ ಕರ್ನಾಟಕ ಗಡಿಯಲ್ಲಿರೋ ಸೂಳಗಿರಿ ಬಳಿಯ ಒಂಟ್ರಪಲ್ಲಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾನೆ. ಈ ವ್ಯಾಪ್ತಿಯಲ್ಲಿ ಒಂಟಿ ಸಲಗವೊಂದು ನಿರಂತರವಾಗಿ ದಾಳಿ ನಡೆಸುತ್ತಿದ್ದು, ಕಳೆದ ಮೂರು ದಿನಗಳಲ್ಲಿ ಒಟ್ಟು ಮೂವರು ಬಲಿಯಾದಂತಾಗಿದೆ. ರಾಜಪ್ಪ ಮತ್ತು ಮುನಿರಾಜು ಎಂಬುವರು ಒಂಟಿ ಸಲಗದ ದಾಳಿಗೆ ಬಲಿಯಾಗಿದ್ದರು. ಇದರ ಬೆನ್ನಲ್ಲೇ ಇವತ್ತು ದೇವನ್ ಎಂಬುವರು ಅದೇ ಒಂಟಿ ಸಲಗದ ದಾಳಿಗೆ ಮೃತಪಟ್ಟಿದ್ದಾರೆ. ರಾಜ್ಯದ ಅರಣ್ಯ ಅಧಿಕಾರಿಗಳ ಸಹಾಯದೊಂದಿಗೆ ತಮಿಳುನಾಡು ಅರಣ್ಯ ಸಿಬ್ಬಂದಿ ಆನೆ ಸೆರೆಗೆ ಬಲೆ ಬೀಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಒಂಟಿ ಸಲಗವನ್ನು ಹಿಡಿಯಲು ಈಗಾಗಲೇ ಕಾರ್ಯಾಚರಣೆ ನಡೆಸಿದ್ದರು. ಎರಡು ಬಾರಿ ಅರವಳಿಕೆ ಚುಚ್ಚು ಮದ್ದು ನೀಡಿದ್ದರೂ ಸೆರೆ ಸಾಧ್ಯವಾಗಿರಲಿಲ್ಲ.

Leave a Reply

Your email address will not be published. Required fields are marked *