ಕಾಡಾನೆ ದಾಂಧಲೆಗೆ ಹೈರಾಣಾದ ಕಾಫಿನಾಡಿನ ರೈತರು

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಅಧಿಕವಾಗಿದೆ. ರಾತ್ರೋ ರಾತ್ರಿ ಗದ್ದೆ, ತೋಟಗಳಿಗೆ ನುಗ್ಗಿ ಬೆಳೆಗಳ ನಾಶ ಮಾಡುತ್ತಿವೆ. ಮೂಡಿಗೆರೆ ತಾಲೂಕಿನ ಕುಂಬರಡಿ ಗ್ರಾಮದ ಭತ್ತದ ಗದ್ದೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ನಾಶ ಮಾಡಿವೆ. ನಿರಂತರ ಕಾಡಾನೆ ದಾಳಿಯಿಂದ ಆತಂಕದಲ್ಲಿರುವ ಗ್ರಾಮಸ್ಥರು, ಆನೆಗಳನ್ನು ಹಿಡಿದು ಸ್ಥಳಾಂತರಿಸುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ. ಸ್ಥಳಕ್ಕೆ ಮೂಡಿಗೆರೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv