ಹೃದಯಾಘಾತದಿಂದ ಗರ್ಭಿಣಿ ಆನೆ ಸಾವು

ಕೊಡಗು: ಜಿಲ್ಲೆಯ ದುಬಾರೆ ಆನೆ ಶಿಬಿರದಲ್ಲಿ ಹೃದಯಾಘಾತದಿಂದ ಗರ್ಭಿಣಿ ಆನೆ ಮೃತಪಟ್ಟಿದೆ. ಮೈಥಿಲಿ(52) ಮೃತಪಟ್ಟ ಆನೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿತ್ತು. ಇಂದು ಬೆಳಗ್ಗೆ 10 ಗಂಟೆಗೆ ಆನೆ ಮೃತಪಟ್ಟಿದೆ. ಅರಣ್ಯ ಇಲಾಖೆಯ ಪಶುವೈದ್ಯ ಮುಜೀಬ್ ನೇತೃತ್ವದಲ್ಲಿ ಮರಣಣೋತ್ತರ ಪರೀಕ್ಷೆ ನಡೆಸಿ, ಸಂಜೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮೈಥಿಲಿ ಈ ಮೊದಲು 5 ಮರಿಗಳಿಗೆ ಜನ್ಮ ನೀಡಿತ್ತು, ಅದರಲ್ಲಿ ಪೃಥ್ವಿ ಎಂಬ ಆನೆ ದುಬಾರೆ ಕ್ಯಾಂಪ್‍ನಲ್ಲಿದೆ.

ನಿಮ್ಮ ಸಲಹೆ ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂರ್ಪಕಿಸಿ:contact@firstnews.tv