ಒಂಟಿ ಸಲಗದ ಆರ್ಭಟ

ಆನೇಕಲ್ : ಕಾಡಿನಿಂದ ನಾಡಿಗೆ ಬಂದ ಒಂಟಿ‌ ಸಲಗವೊಂದು ನಾಗರೀಕರನ್ನು ಅಟ್ಟಾಡಿಸಿ ಓಡಾಡಿಸಿದ ಘಟನೆ ತಮಿಳುನಾಡಿನ ಕೃಷ್ಣಗಿರಿ‌‌‌ ಜಿಲ್ಲೆಯ ಹೊಸೂರಿನ ಕಾಮನ ದೊಡ್ಡಿಯಲ್ಲಿ ನಡೆದಿದೆ. ಮೂರು ತಿಂಗಳ ಹಿಂದೆ ಇಲ್ಲಿನ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮೂವರನ್ನು ಬಲಿ ಪಡೆದಿದ್ದ ಒಂಟಿ ಸಲಗ ಈಗ ಮತ್ತೆ ಕಾಣಿಸಿಕೊಂಡಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಒಂಟಿ ಸಲಗದ ಆರ್ಭಟಕ್ಕೆ ಬೆಚ್ಚಿಬಿದ್ದಿರುವ ಜನರು ಅರಣ್ಯ ಇಲಾಖೆಗೆ ಹಿಡಿಶಾಪ ಹಾಕುತ್ತಿದ್ದಾರೆ. ನಿರಂತರವಾಗಿ ಆನೆ ಕಾಣಿಸಿಕೊಂಡು ಜನರಲ್ಲಿ ಭಯ ಮೂಡಿಸಿದ್ದರೂ, ಅದನ್ನು ನಿಯಂತ್ರಣಕ್ಕೆ ತರುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ.