ಕಾಡಾನೆ ದಾಳಿ, ಅಪಾಯದಿಂದ ಕಾರ್ಮಿಕ ಬಚಾವ್​

ಕೊಡಗು: ಎಸ್ಎಲ್ಎನ್ ತೋಟದ ವಾಚರ್ ಚಂದ್ರಪ್ಪ(5೦) ಎಂಬುವವರ ಮೇಲೆ ಹಠಾತ್ತನೇ ಕಾಡಾನೆ ದಾಳಿ ನಡೆಸಿದ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕು ಚೆಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ.
ಅದೃಷ್ಟವಶಾತ್​ ಚಂದ್ರಪ್ಪ ಅಪಾಯದಿಂದ ಪಾರಾಗಿದ್ದಾರೆ. ಇಂದು ಬೆಳಿಗ್ಗೆ ತೋಟದ ಗಂಟೆ ಬಾರಿಸಲು ತೆರಳುವಾಗ ಕೆರೆ ಬಳಿಯಿಂದ ಬಂದ ಒಂಟಿ ಸಲಗ ಹಠಾತ್​​ ದಾಳಿ ಮಾಡಿದೆ ಎನ್ನಲಾಗಿದೆ. ತಕ್ಷಣ ಎಚ್ಚೆತ್ತುಕೊಂಡ ಚಂದ್ರಪ್ಪ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ತಪ್ಪಿಸಿಕೊಳ್ಳುವ ವೇಳೆ ಸಣ್ಣಪುಟ್ಟ ಗಾಯಗಳಾಗಿದ್ದು, ಚೆಟ್ಟಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv