ನೌಕರರ ರಿಯಾಯಿತಿ ಬಸ್ ಪಾಸ್​​ಗೂ ಈಗ ಬಿತ್ತು ಕತ್ತರಿ!

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಸರ್ಕಾರಿ ನೌಕರರಿಗೆ ನೀಡುತ್ತಿದ್ದ ರಿಯಾಯಿತಿ ಬಸ್ ಪಾಸ್​ಗೆ ಕತ್ತರಿ ಹಾಕಿದೆ. ಬಿಎಂಟಿಸಿ ಆರ್ಥಿಕವಾಗಿ ನಷ್ಟದಲ್ಲಿದ್ದು, ನಷ್ಟದ ಹೊರೆ ಕಡಿಮೆ ಮಾಡುವ ಸಲುವಾಗಿ ಬಿಎಂಟಿಸಿ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ.
ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ರಿಯಾಯಿತಿ ಬಸ್ ಪಾಸ್ ಬದಲಿಗೆ ಸಾರ್ವಜನಿಕರಿಗೆ ನೀಡುವ ಮಾಸಿಕ ಪಾಸ್​ಗಳನ್ನು ಪಡೆಯುವಂತೆ ನೌಕರರಿಗೆ ಸೂಚನೆ ನೀಡಿದೆ. ಬಿಎಂಟಿಸಿಯಿಂದ ಎಲ್ಲಾ ಸರ್ಕಾರಿ ಇಲಾಖೆಗಳ ಮುಖ್ಯಸ್ಥರಿಗೆ ಈ ಸಂಬಂಧ ಪತ್ರ ರವಾನಿಸಲಾಗಿದೆ. ಬಿಎಂಟಿಸಿಯ ಈ ನಿರ್ಧಾರಕ್ಕೆ ರಾಜ್ಯ ಸರ್ಕಾರಿ ನೌಕರರ ವರ್ಗ ತೀವ್ರ ವಿರೋಧ ವ್ಯಕ್ತಪಡಿಸಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv