ಬಾರ್ & ರೆಸ್ಟೊರೆಂಟ್​, ಪಬ್ ಮಾಲೀಕರಿಗೆ ಎಚ್ಚರಿಕೆ.. ಧೂಮಪಾನಕ್ಕೆ ಅವಕಾಶ ಕೊಟ್ರೆ ಹುಷಾರ್..!

ಬೆಂಗಳೂರು: ನಗರದ ಬಾರ್ ಆ್ಯಂಡ್ ರೆಸ್ಟೋರೆಂಟ್, ಹೋಟೆಲ್​​, ಕ್ಲಬ್​, ಪಬ್​​ಗಳಲ್ಲಿ ಧೂಮಪಾನ ಮತ್ತು ತಂಬಾಕು ಪದಾರ್ಥಗಳ ಸೇವನೆಯನ್ನು ಕಟ್ಟು ನಿಟ್ಟಾಗಿ ನಿಷೇಧಿಸಿ ಬಿಬಿಎಂಪಿ ಆದೇಶ ನೀಡಿದೆ. ಹೀಗಿದ್ದೂ ಕೆಲವು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾತ್ರ ನಿರಂತರವಾಗಿ ನಡೆಯುತ್ತಿದೆ. ಹೀಗಾಗಿ ಅಬಕಾರಿ ಆಯುಕ್ತ ಯಶವಂತ್​ ಕುಮಾರ್ ವಿ, ಬಾರ್ & ರೆಸ್ಟೊರೆಂಟ್ ಹೋಟೆಲ್, ಕ್ಲಬ್, ಪಬ್ ಮಾಲೀಕರಿಗೆ ಫೈನಲ್ ವಾರ್ನಿಂಗ್ ಮಾಡಿದ್ದಾರೆ. ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಅವರು, ಕಡ್ಡಾಯವಾಗಿ ಧೂಮಪಾನ ಮುಕ್ತ ಪ್ರದೇಶವನ್ನಾಗಿ ಮಾಡಬೇಕು. ಇಲ್ಲವಾದಲ್ಲಿ ಸ್ಥಳೀಯ ಪೌರಾಡಳಿತದಿಂದ ಪರವಾನಗಿ ಪಡೆದು ಪ್ರತ್ಯೇಕ ಸ್ಥಳ ನಿಗದಿಗೊಳಿಸುವುದು ಕಡ್ಡಾಯ. ಈಗಾಗಲೇ ಆದೇಶ ನೀಡಿದ್ದರೂ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಂತಿಲ್ಲ. ಇದು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ‌. ಕೆಲವೊಮ್ಮೆ ಬೆಂಕಿ ಅವಘಡಗಳಿಗೂ ಕಾರಣವಾಗುತ್ತಿದೆ. ಆದ್ದರಿಂದ ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಮಾತ್ರವಲ್ಲ, ಉದ್ದಿಮೆಯ ಪರವಾನಗಿ ರದ್ದುಗೊಳಿಸುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.ಅಲ್ಲದೇ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮಕ್ಕೆ ಎಲ್ಲಾ ಜಿಲ್ಲೆಗಳ ಅಬಕಾರಿ ಉಪ ಆಯುಕ್ತರಿಗೆ ಆದೇಶ ನೀಡಲಾಗಿದೆ ಎಂದು ತಿಳಿದು ಬಂದಿದೆ.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv