ರಮೇಶ್ ಜಾರಕಿಹೊಳಿ ರಾಜೀನಾಮೆ ಹೇಳಿಕೆ ಹಿನ್ನೆಲೆ ದೋಸ್ತಿ ಪಕ್ಷದ ಮೂವರೂ ನಾಯಕರ ಚರ್ಚೆ

ಬೆಂಗಳೂರು: ಕಾಂಗ್ರೆಸ್​​ಗೆ ರಾಜೀನಾಮೆ ನೀಡುವ ರಮೇಶ್ ಜಾರಕಿಹೊಳಿ ನಡೆಯಿಂದ ದೋಸ್ತಿ ನಾಯಕರು ಆತಂಕಕ್ಕೆ ಈಡಾಗಿದ್ದಾರೆ ಎನ್ನಲಾಗ್ತಿದೆ. ಮುಂದುವರಿದ ಭಾಗವಾಗಿ, ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ದೋಸ್ತಿ ನಾಯಕರು ತಮ್ಮದೇ ಆದ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ, ಈ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿ ಜೊತೆ ಡಿಸಿಎಂ ಜಿ.ಪರಮೇಶ್ವರ್ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಮಹತ್ವದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಸಿಎಂ ಕುಮಾರಸ್ವಾಮಿ ಅವ್ರ ಜೆ.ಪಿ. ನಗರದ ನಿವಾಸದಲ್ಲಿ ಮೂವರೂ ನಾಯಕರು ಗಂಭೀರ ಚರ್ಚೆಯಲ್ಲಿ ತೊಡಗಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದರೆ ಸರ್ಕಾರದ ಮೇಲೆ ಏನು ಪರಿಣಾಮ ಬೀರಬಹುದೆಂಬ ಬಗ್ಗೆ ಚರ್ಚೆ ನಡೆದಿದೆ. ರಮೇಶ್ ಜಾರಕಿಹೊಳಿ ಜೊತೆಗಿರುವ ಶಾಸಕರ ನಡೆ, ಹಾಗೂ ಇತರೆ ಅತೃಪ್ತರನ್ನ ತಮ್ಮ ಹಿಡಿತದಲ್ಲಿಟ್ಟುಕೊಳ್ಳೋದು ಹೇಗೆ ಎಂಬುದುರ ಬಗ್ಗೆಯೂ ಚರ್ಚೆ ನಡೆದಿದೆ. ಅಲ್ಲದೆ ಉಪಚುನಾವಣೆ ಸಿದ್ಧತೆ, ಅಭ್ಯರ್ಥಿ ಆಯ್ಕೆ ಹಾಗೂ ಚುನಾವಣೆ ನಂತರ ಕೈಗೊಳ್ಳಬೇಕಾದ ಸರ್ಕಾರದ ಕೆಲ ಕಾರ್ಯಕ್ರಮಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಇದಕ್ಕೂ ಮುನ್ನ ಕಾಗವಾಡ ಕೈ ಶಾಸಕ ಶ್ರೀಮಂತ ಪಾಟೀಲ್ ಜೊತೆ ಸಿಎಂ, ಡಿಸಿಎಂ ಚರ್ಚೆ ನಡೆಸಿದ್ದಾರೆ. ರಮೇಶ್ ಜಾರಕಿಹೊಳಿ ಜೊತೆ ಗುರುತಿಸಿಕೊಂಡಿದ್ದಾರೆಂಬ ಕಾರಣಕ್ಕೆ ಅವರನ್ನ ಕರೆಸಿಕೊಂಡು ಚರ್ಚೆ ನಡೆಸಿದ್ದಾರೆ. ರಾಜೀನಾಮೆ ನೀಡುವುದಿಲ್ಲ ಎಂದು ಶ್ರೀಮಂತ ಪಾಟೀಲ್‌, ಸಿಎಂ ಕುಮಾರಸ್ವಾಮಿ ಸಮ್ಮುಖದಲ್ಲಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv