ಸುಮಲತಾ ಅಂಬರೀಶ್​ಗೆ ಬೆಂಬಲ ಆರೋಪ;​ 7 ಬ್ಲಾಕ್​ ಕಾಂಗ್ರೆಸ್ ಅಧ್ಯಕ್ಷರ ಉಚ್ಚಾಟನೆ

ಮಂಡ್ಯ: ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕರ ಬಂಡಾಯ ತೀವ್ರಗೊಂಡಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಜಿಲ್ಲೆಯ 7 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನ ಉಚ್ಚಾಟನೆ ಮಾಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿ.ವೈ.ಘೋರ್ಪಡೆ ಆದೇಶ ಹೊರಡಿಸಿದ್ದಾರೆ. ನಾಗಮಂಗಲ, ಮಳವಳ್ಳಿ, ಕೆಎಂ ದೊಡ್ಡಿ, ಕೆಆರ್ ಪೇಟೆ ಮೇಲುಕೋಟೆ ನಗರ ಗ್ರಾಮಾಂತರ ಬ್ಲಾಕ್ ಅಧ್ಯಕ್ಷರನ್ನ ಉಚ್ಛಾಟನೆ ಮಾಡಲಾಗಿದೆ.

1) ಹೆಚ್.ಅಪ್ಪಾಜಪ್ಪ, ಮಂಡ್ಯ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
2) ಎ.ಎಸ್.ರಾಜೀವ್, ಭಾರತೀ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
3) ಪುಟ್ಟರಾಮು, ಮಳವಳ್ಳಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
4) ಕೆ.ಜೆ.ದೇವರಾಜ್, ಮಳವಳ್ಳಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
5) ಎಂ.ಪ್ರಸನ್ನ, ನಾಗಮಂಗಲ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
6) ಕೆ.ಆರ್.ರವೀಂದ್ರ ಬಾಬು, ಕೆ.ಆರ್.ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
7) ಎಸ್.ಬಿ.ಪ್ರಕಾಶ್, ಮೇಲುಕೋಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
ಈ ಎಲ್ಲರು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಬಹಿರಂಗವಾಗಿ ಗುರುತಿಸಿಕೊಂಡಿದ್ದರು ಹಿನ್ನೆಲೆಯಲ್ಲಿ ವಜಾಗೊಳಿಸಲಾಗಿದೆ.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv