ಜಿಲ್ಲಾ ಜೆಡಿಎಸ್​ನಲ್ಲಿ ಭಿನ್ನಮತ ಸ್ಫೋಟ

ಧಾರವಾಡ : ಜಿಲ್ಲಾ ಜೆಡಿಎಸ್​ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಇಂದು ನಡೆದ ಜಿಲ್ಲಾಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಎರಡು ಗುಂಪುಗಳು ಪರಸ್ಪರ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದವು.
ನಗರದ ನೌಕರ ಭವನದಲ್ಲಿ ನಡೆಯುತ್ತಿದ್ದ ಸಭೆಯಲ್ಲಿ, ಕುಮಾರಸ್ವಾಮಿ ಸಿಎಂ ಆಗಿರುವುದರಿಂದ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಕುರಿತಾಗಿ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ರಾಜಣ್ಣ ಕೊರವಿ ಹಾಗೂ ಗುರುರಾಜ್ ಹುಣಸಿಮರದ ಬೆಂಬಲಿಗರು ಭಾಗಿಯಾಗಿದ್ದರು. ಈ ವೇಳೆ ಪಕ್ಷದ ಪ್ರಾಮಾಣಿಕ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ ಎಂದು ಗುರುರಾಜ್ ಹುಣಸಿಮರದ ಬೆಂಬಲಿಗರು ಸಭೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ಶುರುವಾದ ಮಾತಿನ ಚಕಮಕಿ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv