ಬಿ.ಸಿ.ಪಾಟೀಲ್​ಗೆ ಸಚಿವ ಸ್ಥಾನ ನೀಡಿ

ಹಾವೇರಿ: ಜಿಲ್ಲೆಯ ಕಾಂಗ್ರೆಸ್ ಪಕ್ಷದ ಏಕೈಕ ಶಾಸಕ ಬಿ.ಸಿ.ಪಾಟೀಲ್​ಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಹಿರೆಕೆರೂರು ಪಟ್ಟಣದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಹಿರೆಕೆರೂರು ಪಟ್ಟಣ ಬಸ್ ನಿಲ್ದಾಣದ ಸರ್ಕಲ್ ನಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ರು. ಈ ವೇಳೆ, ಬಿ.ಸಿ. ಪಾಟೀಲ್​ಗೆ ಸಚಿವ ಸ್ಥಾನ ನೀಡುವಂತೆ ಕಾರ್ಯಕರ್ತರು ಹಾಗೂ ಮುಖಂಡರು ಒತ್ತಾಯ ಮಾಡಿದ್ರು. ಪ್ರತಿಭಟನೆಯಲ್ಲಿ ಪಾಟೀಲರ ನೂರಾರು ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ರು.

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ : contact@firstnews.tv