ಸಾಲಭಾದೆಗೆ ಬೇಸತ್ತು ರೈತ ಆತ್ಮಹತ್ಯೆ

ಬಳ್ಳಾರಿ: ಸಾಲಬಾಧೆ ತಾಳಲಾರದೇ ರೈತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಗರಿಬೊಮ್ಮನಹಳ್ಳಿ ತಾಲೂಕಿನ ಸೀಗೆನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಳೆಗೌಡ್ರು ದೇವೇಂದ್ರಗೌಡ ಸಾಲಭಾದೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 85 ವರ್ಷ ವಯಸ್ಸಿನ ಇವರು ಖಾಸಗಿ ಬ್ಯಾಂಕ್​ನಲ್ಲಿ 3 ಲಕ್ಷ ರೂಪಾಯಿ ಬೆಳೆ ಸಾಲ ಮಾಡಿದ್ದರು ಎನ್ನಲಾಗ್ತಿದೆ. ಅಲ್ಲದೆ ತನ್ನ 13 ಎಕರೆ ಭೂಮಿಯಲ್ಲಿ ಈತ ಬೆಳೆದ ಬೆಳೆ ಕೈಕೊಟ್ಟಿದ್ದರಿಂದ ಮನನೊಂದು ಆತ್ಮಹ್ಯತ್ಯೆಗೆ ಶರಣಾಗಿದ್ದಾರೆ. ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv