ವಿದ್ಯುತ್​ ತಂತಿ ತುಳಿದು ರೈತ ಸಾವು..!

ಹಾಸನ: ಜಮೀನಿನ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತರೊಬ್ಬರು ಮೃತಪಟ್ಟಿದ್ದಾರೆ. ಅರಸೀಕೆರೆ ತಾಲೂಕಿನ ನಾಗವೇದಿ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದೆ. ಅರುಣ್ ಕುಮಾರ್ (45) ಮೃತ ರೈತ. ಅರುಣ್​ ಕುಮಾರ್​​​ ಎಂದಿನಂತೆ ಇಂದು ಜಮೀನು ಕೆಲಸಕ್ಕೆ ಹೋಗಿದ್ದಾಗ ವೇಳೆ ದುರಂತ ನಡೆದಿದೆ. ಕಳೆದ ರಾತ್ರಿ ಮಳೆಯ ಗಾಳಿಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದು ದುರಂತಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಅರಸೀಕೆರೆ ಗ್ರಾಮಾಂತರ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv