ಸಾಲಭಾದೆ ತಾಳಲಾರದೆ ರೈತ ನೇಣಿಗೆ ಶರಣು..!

ಕಲಬುರ್ಗಿ: ಸಾಲಭಾದೆ ತಾಳಲಾರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಮಲಾಪುರ ತಾಲೂಕಿನ ಡೊಂಗರಗಾಂವ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೇವಣಸಿದ್ದಪ್ಪ ಜನಕಟ್ಟಿ (32) ಸುಮಾರು ಎರಡು‌ ಎಕರೆ ಜಮೀನಿನಲ್ಲಿ ತೊಗರಿ ಬೆಳೆದಿದ್ದರು. ಇದಕ್ಕಾಗಿ ಕೆಜಿಬಿ ಬ್ಯಾಂಕ್​ನಲ್ಲಿ 55 ಸಾವಿರ ಮತ್ತು‌ ಖಾಸಗಿಯಾಗಿ 4 ಲಕ್ಷ ರೂ. ಸಾಲ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಾಲ ತೀರಿಸಲಾಗದೆ ಮನನೊಂದು ತನ್ನ ಸ್ವಂತ ಜಮೀನಿನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಮಲಾಪುರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿರುವುದು ತಿಳಿದು ಬಂದಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv