ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ರೈತ ಸಾವು

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಮಹಾಮಳೆಗೆ ನದಿಗಳು ತುಂಬಿ ಹರಿಯುತ್ತಿದ್ದು, ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ರೈತ ಸಾವನ್ನಪ್ಪಿದ ಘಟನೆ, ಶೃಂಗೇರಿ ತಾಲೂಕಿನ ಗಿಣಿಕಲ್ ಸಮೀಪದ ಗೋಣೆಬೈಲು ಗ್ರಾಮದಲ್ಲಿ ನಡೆದಿದೆ.
ಸುರೇಂದ್ರ 46 ಮೃತ ವ್ಯಕ್ತಿ. ಜಮೀನಿನಲ್ಲಿ ಕೆಲಸ ಮಾಡುವಾಗ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.