ಸಾಲ ಬಾಧೆ: ರೈತ ನೇಣಿಗೆ ಶರಣು

ದಾವಣಗೆರೆ: ಸಾಲ ಬಾಧೆ ತಾಳಲಾರದೇ ರೈತರೊಬ್ಬರು ನೇಣಿಗೆ ಶರಣಾಗಿರುವ ಘಟನೆ ಬೇವಿನಹಳ್ಳಿ ಗ್ರಾಮದ ಜಮೀನಿನಲ್ಲಿ ನಡೆಿದಿದೆ. ನಾಗೇಂದ್ರಪ್ಪ (58) ಸಾವಿಗೆ ಶರಣಾದ ರೈತ. ಮೃತ ರೈತ ವಿವಿಧ ಕಡೆ ಸುಮಾರು ₹ 8 ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದರು, ಸಾಲಗಾರರ ಕಾಟಕ್ಕೆ ಬೇಸತ್ತು, ಇಂದು ಬೆಳಿಗ್ಗೆ ತನ್ನ ಜಮೀನಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv