ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ರೈತ ಮುಖಂಡರ ಪ್ರತಿಭಟನೆ

ರಾಮನಗರ: ರಾಜ್ಯದಲ್ಲಿ ಆಗುತ್ತಿರುವ ನಿರಂತರ ರೈತರ ಆತ್ಮಹತ್ಯೆ ಹಿನ್ನೆಲೆಯಲ್ಲಿ ರೈತ ಮುಖಂಡರು ಚನ್ನಪಟ್ಟಣದ ತಾಲೂಕು ಕಚೇರಿ ಎದರು ಪ್ರತಿಭಟನೆ ನಡೆಸಿದರು.

ಕರ್ನಾಟಕ ದಂಡಿ ಮಾರಮ್ಮ ರೈತ ಸಂಘದ ಕಾರ್ಯಕರ್ತರು ತಾಲೂಕು ಕಚೇರಿಯ ಮುಂಭಾಗ ಕುಳಿತು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಇದೇ ವೇಳೆ, ಶ್ರೀಘ್ರವೇ ರೈತರ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ನೂರಕ್ಕೂ ಹೆಚ್ಚು ರೈತ ಮುಖಂಡರು ಭಾಗಿಯಾಗಿದ್ದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv