ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

ಗುಂಡ್ಲುಪೇಟೆ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಣ್ಣೂರುಕೇರಿ ರೈತ ಸಂಘದಿಂದ ಸ್ಥಳೀಯ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಕೆಲವು ಗ್ರಾಮಗಳಲ್ಲಿ ತುಂಬಿಕೊಂಡಿರುವ ಚರಂಡಿಗಳ ಹೂಳೆತ್ತಿಸಿಲ್ಲ. ನರೇಗಾ ಯೋಜನೆಯ ಅಭಿವೃದ್ಧಿ ಕುಂಠಿತವಾಗಿದೆ. ಚಿಕ್ಕ ಮೋರಿಗಳಿಂದಾಗಿ ಮಳೆ ನೀರು ಮತ್ತು ಕೊಳಚೆ ನೀರು ಮನೆಗಳಿಗೆ ನುಗ್ಗುತ್ತದೆ. ಶಾಲೆ ಆವರಣದ ಸುತ್ತಮುತ್ತಲೂ ಅನೈರ್ಮಲ್ಯ ಹೆಚ್ಚಾಗಿದೆ. ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ನೀಡುವಲ್ಲಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ವಿಫಲವಾಗಿದ್ದಾರೆ. ಕೂಡಲೇ ಈ ಕುರಿತು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

Leave a Reply

Your email address will not be published. Required fields are marked *