ಬಿತ್ತನೆ ಬೀಜಕ್ಕಾಗಿ ರೈತರ ಗೋಳು..ಕೇಳೋಱರು ?

ಯಾದಗಿರಿ: ರಾಜ್ಯಕ್ಕೆ ಮುಂಗಾರು ಮಳೆ ಎಂಟ್ರಿ ಕೊಟ್ಟಾಗಿದೆ. ಭೂಮಿ ಹದ ಬಿದ್ರೆ ಬಿತ್ತನೇ ಶುರು. ಆದರೆ, ಕೃಷಿಕರಿಗೆ ಆರಂಭದಲ್ಲೆ ಬಿತ್ತನೆ ಬೀಜಕ್ಕಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ, ಗುರುಮಠಕಲ್ ತಾಲೂಕು ರೈತ ಸಂಪರ್ಕ ಕೇಂದ್ರದಲ್ಲಿ ಬಿತ್ತನೆ ಬೀಜ ಪಡೆದುಕೊಳ್ಳಲು ರೈತರು ಹರಸಾಹಸ ಪಡಬೇಕಾಯಿತು.
ಈಗಾಗಲೇ ಜಿಲ್ಲಾಧಿಕಾರಿ, ಜಿಲ್ಲೆಯ ಎಲ್ಲ ರೈತ ಸಂಪರ್ಕ ಕೇಂದ್ರದಲ್ಲಿ ಬಿತ್ತನೆ ಬೀಜವನ್ನು ರೈತರಿಗೆ ವಿತರಿಸಲು ರೆಡಿ ಇವೆ ಎಂದು ಹೇಳಿದ್ರು. ಆದ್ರೆ ಇತ್ತ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ಮಾತ್ರ ಇನ್ನೂ ಬಿತ್ತನೆ ಬೀಜ ನೀಡುತ್ತಿಲ್ಲ ಎಂದು ರೈತರು ಆರೋಪಿಸ್ತಿದ್ದಾರೆ.
ಎರಡು ದಿನದಿಂದ ರೈತ ಸಂಪರ್ಕ ಕೇಂದ್ರದ ಮುಂದೆ ಬಿತ್ತನೆ ಬೀಜಕ್ಕಾಗಿ ಬೆಳಗ್ಗೆ 8 ಗಂಟೆಯಿಂದಲೇ ಕಾಯುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೂಡಲೇ ಎಚ್ಚೆತ್ತು ರೈತರಿಗೆ ಬಿತ್ತನೆ ಬೀಜ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.