ನಾಡಹಬ್ಬದ ಮೆರಗು ಹೆಚ್ಚಿಸಿದ ರೈತ ದಸರಾ

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ನಾಡಹಬ್ಬ ದಸರಾ ಸಂಭ್ರಮ ಮನೆ ಮಾಡಿದೆ. ಅರಮನೆ ಆವರಣದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗ ರೈತ ದಸರಾವನ್ನು ಹಮ್ಮಿಕೊಳ್ಳಲಾಗಿರುವ ರೈತ ದಸರಾಗೆ ಕೃಷಿ ಸಚಿವ ಶಿವಶಂಕರ್ ರೆಡ್ಡಿ ಚಾಲನೆ ನೀಡಿದರು. ಈ ವೇಳೆ ಅವರಿಗೆ ಸಚಿವರಾದ ಸಾ.ರಾ. ಮಹೇಶ್,‌ಜಿ ಟಿ ದೇವೇಗೌಡ ಹಾಗೂ ರೈತರು ಸಾಥ್ ನೀಡಿದರು. ಈ ವೇಳೆ ಮಾತನಾಡಿದ ಶಿವಶಂಕರ್ ರೆಡ್ಡಿ, ರೈತ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಕ್ಕೆ ನನಗೆ ಖುಷಿಯಾಗಿದೆ. ರೈತರ ಕೃಷಿಯಲ್ಲಿ ಅಭಿವೃದ್ಧಿ ಮಾಡಲು ಅನೇಕ ಬದಲಾವಣೆಗಳನ್ನು ತರಲು ಸರ್ಕಾರ ಮುಂದಾಗಿದೆ ಎಂದರು.

ಇನ್ನು, ರೈತರು ಎತ್ತಿನ ಗಾಡಿ ಹಾಗೂ ಎತ್ತುಗಳನ್ನು ಸಿಂಗರಿಸಿಕೊಂಡು ಬಂದಿದ್ದರು. ಕುರಿಗಳು ಹಾಗೂ ಎತ್ತಿನಗಾಡಿಗಳ ಮೆರವಣಿಗೆ ನಡೆಯಿತು. ಸರ್ಕಾರದ ರೈತಪರ ಕಾರ್ಯಕ್ರಮಗಳ ಕುರಿತಾದ ಸ್ತಬ್ದ ಚಿತ್ರಗಳನ್ನು ಪ್ರದರ್ಶಿಸಲಾಯಿತು. ಮೆರವಣಿಗೆಯಲ್ಲಿ ಮಹಿಳೆಯರು ಡೊಳ್ಳು ಕುಣಿತ, ನಂದಿ ಕುಣಿತದ ಜತೆಗೆ ಕುಂಬಕಳಶ ಹೊತ್ತು ಸಾಗಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv