ಮಗ ರಾಜಣ್ಣನಿಗೆ ಟಿಕೆಟ್ ಸಿಗಲಿಲ್ಲ ಅಂತಾ ತಂದೆ ಸಾವು..

ಶಿಡ್ಲಘಟ್ಟ: ಈ ಬಾರಿ ಜೆಡಿಎಸ್​ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಶಿಡ್ಲಘಟ್ಟ ಶಾಸಕ ರಾಜಣ್ಣ ಅವರ ತಂದೆ ಸಾವನ್ನಪ್ಪಿದ್ದಾರೆ. ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ ರಾಜಣ್ಣ ಅವರಿಗೆ ಜೆಡಿಎಸ್ ಕೈ ತಪ್ಪಿದ ಹಿನ್ನೆಲೆ, ಅವರ ತಂದೆ 79 ವರ್ಷದ ಮುನಿಯಪ್ಪ ತೀವ್ರ ಆಘಾತಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ಕಳೆದ ಮೂರು ದಿನಗಳಿಂದ ಅವರು ಯಾರ ಜೊತೆಗೂ ಮಾತನಾಡದೇ ಮೌನವಹಿಸಿದ್ದರು ಎನ್ನಲಾಗಿದೆ. ತಮ್ಮ ಮಗನಿಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಅದೇ ಕೊರಗಿನಲ್ಲಿ ಇಂದು ಅವರು ಸಾವನ್ನಪ್ಪಿದ್ದಾರೆ ಅಂತಾ ಕುಟುಂಬದ ಮೂಲಗಳು ತಿಳಿಸಿವೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv