ದಿನೇಶ್ ಗುಂಡೂರಾವ್, ಪತ್ನಿ ತಬೂ ವಿರುದ್ಧ ಅಶ್ಲೀಲ ಕಾಮೆಂಟ್‌: ಆರೋಪಿ ಅರೆಸ್ಟ್

ಬೆಂಗಳೂರು: ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಕಾರ್ಯಾಚರಣೆ ನಡೆಸಿ, ಫೇಸ್​​ಬುಕ್‌ನಲ್ಲಿ ಅಶ್ಲೀಲ ಕಾಮೆಂಟ್ ಗಳನ್ನ ಪ್ರಕಟಿಸುತ್ತಿದ್ದ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಆರ್. ಮಲ್ಲಿಕಾರ್ಜುನ ಬಂಧಿತ ಆರೋಪಿ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಅವರ ಪತ್ನಿ ತಬೂ ರಾವ್ ವಿರುದ್ಧ ಅಶ್ಲೀಲ ಕಾಮೆಂಟ್‌ಗಳನ್ನ ಆರೋಪಿ ಪೊಸ್ಟ್ ಮಾಡ್ತಿದ್ದ ಎನ್ನಲಾಗಿದೆ. ಕಶ್ಯಪ್ ನಂದನ್ ಎಂಬುವವರು ಕಳೆದ 15 ರಂದು ಸೈಬರ್ ಕ್ರೈಂ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ರು. ಈ ಹಿನ್ನೆಲೆಯಲ್ಲಿ ಆರೋಪಿಯನ್ನ ಇಂದು ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.


Follow us on:

YouTube: firstNewsKannada  Instagram: firstnews.tv  Face Book: firstnews.tv  Twitter: firstnews.tv