ರಾಜ್ಯಕ್ಕೆ ಐದನೇ ರ್ಯಾಂಕ್ ಪಡೆದ ಕಲ್ಪತರು ನಾಡಿನ ಹುಡುಗ

ತುಮಕೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಿಇಟಿ ಫಲಿತಾಂಶ ಪ್ರಕಟಗೊಂಡಿದ್ದು, ತುಮಕೂರು ವಿದ್ಯಾರ್ಥಿ ರಾಜ್ಯಕ್ಕೆ 5 ನೇ ರ್ಯಾಂಕ್ ಪಡೆದಿದ್ದಾನೆ. ವಿದ್ಯಾರ್ಥಿ ಶ್ರೇಯಸ್ ಈ ಮಹತ್ತರ ಸಾಧನೆ ಮಾಡಿದಾತ. ಶ್ರೇಯಸ್ ಬಿಎಸ್ಸಿ ವಿಭಾಗದಲ್ಲಿ ಐದನೇ ರ್ಯಾಂಕ್ ಪಡೆದಿದ್ದಾರೆ. ರಾಜ್ಯಕ್ಕೆ ಐದನೇ ರ್ಯಾಂಕ್ ಬರೋ ಮೂಲಕ ಸಾಧನೆ ಮಾಡಿದ್ದಾನೆ. ಈತನ ಸಾಧನೆಗೆ ಕಾಲೇಜಿನ ಶಿಕ್ಷಕರು, ಪೋಷಕರು ಸೇರಿದಂತೆ ಹಲವರು ಅಭಿನಂದನೆ ಸಲ್ಲಿಸಿದ್ದಾರೆ. ಮುಂದೆ ನೀಟ್ ಪರೀಕ್ಷೆಯ ನಿರೀಕ್ಷೆಯಲ್ಲಿ ವಿದ್ಯಾರ್ಥಿ ಶ್ರೇಯಸ್ ಇದ್ದು, ಆನಂತರ ತನ್ನ ಮುಂದಿನ ಶಿಕ್ಷಣ ಕುರಿತು ನಿರ್ಧರಿಸಲಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv