ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ

ತುಮಕೂರು: ನಿವೇಶನ ಹಂಚಿಕೆ ವಿಚಾರವಾಗಿ ಜೆಡಿಎಸ್​ ಮತ್ತು ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದ ಘಟನೆ ಪಾವಗಡ ತಾಲೂಕಿನ ವದನಕಲ್ಲು ಗ್ರಾಮದಲ್ಲಿ ನಡೆದಿದೆ.
ಚುನಾವಣೆಗೂ ಮುನ್ನ ನಿವೇಶನ ಹಂಚಿಕೆ ಪಟ್ಟಿಯನ್ನು ಜೆಡಿಎಸ್​ ಕಾರ್ಯಕರ್ತರು ನೀಡಿದ್ದರು. ನಿವೇಶನ ಹಂಚಿಕೆ ಪಟ್ಟಿಯ ಬಗ್ಗೆ ಕಾಂಗ್ರೆಸ್​ ಕಾರ್ಯಕರ್ತರು ಅಸಮಾಧಾನಗೊಂಡಿದ್ದರು. ಇದರಿಂದಾಗಿ ನಿವೇಶನ ಹಂಚಿಕೆ ಪಟ್ಟಿಯಲ್ಲಿ ಸರಿಯಿಲ್ಲ ಎಂದು ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಎರಡು ದಿನಗಳ ಹಿಂದೆ ಕಾರ್ಯನಿರ್ವಾಹಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದರು. ಈ ವೇಳೆ executive officer ಎದುರೇ ಕಾಂಗ್ರೆಸ್​​ ಮತ್ತು ಜೆಡಿಎಸ್​ ಕಾರ್ಯಕರ್ತರು ದೊಣ್ಣೆ ಹಿಡಿದು ಹೊಡೆದಾಡಿಕೊಂಡಿದ್ದಾರೆ. ಈ ಕುರಿತು ಅರಸೀಕೆರೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.