ಆಡಿಯೋ ಪ್ರಕರಣ: ಬಿಎಸ್‌ವೈ ವಿರುದ್ಧ ದಾಖಲಾದ ಎಫ್ಐಆರ್ ರದ್ದು ಕೋರಲು ಸಿದ್ಧತೆ

ಕಲಬುರ್ಗಿ: ಆಪರೇಷನ್ ಕಮಲದ ಆಡಿಯೋ ಟೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿ‌ ನಾಲ್ವರ ವಿರುದ್ಧ ರಾಯಚೂರಿನ ದೇವದುರ್ಗ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಕಲಬುರಗಿ ಪೀಠಕ್ಕೆ ಅರ್ಜಿ ಸಲ್ಲಿಸಲು ಬಿಎಸ್‌ವೈ ಪರ ವಕೀಲರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಜೆಡಿಎಸ್ ಶಾಸಕ ನಾಗನಗೌಡ ಕಂದಕೂರು ಪುತ್ರ ಶರಣಗೌಡ ನೀಡಿದ್ದ ದೂರಿನ ಮೇರೆಗೆ ದೇವದುರ್ಗ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕಲಬುರ್ಗಿ ಹೈಕೋರ್ಟ್ ಪೀಠದ ವ್ಯಾಪ್ತಿಗೆ ದೇವದುರ್ಗ ಪೊಲೀಸ್ ಠಾಣೆ ಬರುತ್ತದೆ. ನಿನ್ನೆ ಪ್ರಕರಣವೊಂದರ ವಾದ ಮಂಡನೆಗೆ ಕಲಬುರ್ಗಿ ಹೈಕೋರ್ಟ್ ಪೀಠಕ್ಕೆ ಆಗಮಿಸಿದ್ದ ಸಿ.ವಿ.ನಾಗೇಶ್ ಎಫ್​​ಐಆರ್​ ರದ್ದು ಕೋರಿ ಅರ್ಜಿ ಸಲ್ಲಿಸುವ ಬಗ್ಗೆ ಮಾಹಿತಿ ನೀಡಿದರು.


YouTube: firstNewsKannada  Instagram: firstnews.tv  Face Book: firstnews.tv  Twitter: firstnews.tv