ಸೈನಿಕ ಶಾಲೆಯ ಐವರು ಸಿಬ್ಬಂದಿ ವಿರುದ್ಧ ಬಿತ್ತು ಕೇಸ್..!

ಕೊಡಗು: ಕೂಡಿಗೆ ಸೈನಿಕ ಶಾಲೆಯಲ್ಲಿ ವಿದ್ಯಾರ್ಥಿಯ ಸಂಶಯಾಸ್ಪದ ಸಾವು ಪ್ರಕರಣ ಸಂಬಂಧ ಐವರು ಸಿಬ್ಬಂದಿ ವಿರುದ್ಧ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಶಾಲೆಯ ಐವರು ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸೈನಿಕ ಶಾಲೆಯ ಮಂಜಪ್ಪ (ಕನ್ನಡ ಶಿಕ್ಷಕ), ಗೋವಿಂದರಾಜು(ಕಂಪ್ಯೂಟರ್ ಶಿಕ್ಷಕ), ಸೀಮಾ (ಉಪಪ್ರಾಂಶುಪಾಲೆ), ಮ್ಯಾಥ್ಯೂ(ಎಒ), ಸುನೀಲ್ (ವಾರ್ಡನ್) ಎಂಬುವವರ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಎಸ್ಪಿ ರಾಜೇಂದ್ರ ಪ್ರಸಾದ್, ಈ ಸಂಬಂಧ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆ ಕುರಿತು ತನಿಖೆ ನಡೆಸುತ್ತಿದ್ದೇವೆ. ಈವರೆಗೆ ಯಾರನ್ನೂ ವಶಕ್ಕೆ ಪಡೆದಿಲ್ಲ. ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv