ಕರಕುಶಲ ಅಭಿವೃದ್ಧಿ ನಿಗಮದ ಹಣಕಾಸು ವ್ಯವಸ್ಥಾಪಕನ ವಿರುದ್ಧ FIR..!

ಬೆಂಗಳೂರು: ನಕಲಿ ಬ್ಯಾಂಕ್ ಖಾತೆ ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ ವಂಚನೆ ಆರೋಪದ ಮೇಲೆ ಕರಕುಶಲ ಅಭಿವೃದ್ಧಿ ನಿಗಮದ ಹಣಕಾಸು ವ್ಯವಸ್ಥಾಪಕನ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಹ್ಯಾಂಡಿಕ್ರಾಫ್ಟ್ ಡೆವಲಪ್​ಮೆಂಟ್ ಕಾರ್ಪೋರೆಷನ್ ಲಿಮಿಟ್ ಹೆಸರಿನಲ್ಲಿ ವಂಚನೆ ಮಾಡಿದ ಆರೋಪದ ಮೇಲೆ ವ್ಯವಸ್ಥಾಪಕ ಕಿಶೋರ್ ವಿರುದ್ಧ ಅಶೋಕ್ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಕೆಲ ಬ್ಯಾಂಕ್ ಅಧಿಕಾರಿಗಳ ಜೊತೆ ಸೇರಿ ಕೋಟಿ ಕೋಟಿ ವಂಚನೆ ಮಾಡಿದ ಆರೋಪದಡಿ ಪ್ರಧಾನ ವ್ಯವಸ್ಥಾಪಕ ನಾರಾಯಣ್ ಎಂಬುವವರು ದೂರು ನೀಡಿದ್ದಾರೆ. ನಕಲಿ ಖಾತೆ ತೆರದು ವ್ಯವಹಾರ ಮಾಡಿ ₹15 ಕೋಟಿ ದುರುಪಯೋಗ ಪಡಿಸಿಕೊಂಡಿದ್ದಾರೆ. ಇದು ಲೆಕ್ಕಪರಿಶೋಧನೆ ಮಾಡುವ ವೇಳೆ ಬೆಳಕಿಗೆ ಬಂದಿದೆ ಅಂತಾ ಆರೋಪಿಸಲಾಗಿದೆ. ಕೆಲ ಬ್ಯಾಂಕ್ ಅಧಿಕಾರಿಗಳು ಕೂಡಾ ವಂಚನೆಯಲ್ಲಿ ಶಾಮೀಲಾಗಿದ್ದಾರೆ ಅಂತಾ ಆರೋಪಿಸಲಾಗಿದೆ. ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧ ಈಗಾಗಲೇ ಬೇರೆ ಬೇರೆ ಸೆಕ್ಷನ್​ಗಳ ಅಡಿ ದೂರು ದಾಖಲಾಗಿದೆ. ಅಲ್ಲದೇ ವಿಚಾರಣೆಗೆ ಹಾಜರಾಗುವಂತೆ ಅಶೊಕ್​ನಗರ ಪೊಲೀಸರು ನೋಟಿಸ್ ನೀಡಿದ್ದಾರೆ.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv