ಧಗಧಗನೆ ಹೊತ್ತಿ ಉರಿದ ನೀಲಗಿರಿ ತೋಪು

ರಾಮನಗರ: ನೆಲಮಂಗಲ ತಾಲೂಕಿನ ಮಾಚನಹಳ್ಳಿ ಗ್ರಾಮದ ನೀಲಗಿರಿ ತೋಪಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 2 ಎಕರೆ ನೀಲಗಿರಿ ತೋಪಿಗೆ ಬೆಂಕಿ ಹತ್ತಿಕೊಂಡಿದೆ. ಗ್ರಾಮದ ರೈತ ಸೋಮಶೇಖರ್‌ಗೆ ಸೇರಿದ ನೀಲಗಿರಿ ತೋಪಿಗೆ ಬೆಂಕಿ ಹತ್ತಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *