ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳು ಭಸ್ಮ

ಕೋಲಾರ: ಮನೆಯಲ್ಲಿ ಆಕಸ್ಮಿಕ ಕಾಣಿಸಿಕೊಂಡ ಬೆಂಕಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಮುಳಬಾಗಿಲು ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ನಡೆದಿದೆ.

ತಾವರೆಕೆರೆ ಗ್ರಾಮದ ರಾದಪ್ಪ ಎಂಬುವವರ ಮನೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿದ್ದ ಹತ್ತಕ್ಕೂ ಹೆಚ್ಚು ಭತ್ತದ ಚೀಲಗಳು ಮತ್ತು ಅಪಾರ ಪ್ರಮಾಣದ ಗೃಹ ಬಳಕೆ ವಸ್ತುಗಳು ಸುಟ್ಟು ಭಸ್ಮಗೊಂಡಿವೆ. ಬೆಂಕಿ ಅವಘಡದಲ್ಲಿ ₹ 2 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ ಎಂದು ಅಂದಾಜಿಸಲಾಗಿದೆ. ಕಿಡಿಗೇಡಿಗಳು ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ಮುಳಬಾಗಿಲು ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv